(ನ್ಯೂಸ್ ಕಡಬ) newskadaba.com ಕರಾವಳಿ ಅ. 19: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ, ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಜನರು ಸುಧಾರಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಧ್ಯೆ ಮತ್ತೆ ವಾಯುಭಾರ ಕುಸಿತ ಉಂಟಾಗಿದೆ.
ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರ ಈ ಕುರಿತು ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಸೋಮವಾರ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಮೂರು ದಿನ ಮಳೆಯಾಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆಯೆಂದು ತಿಳಿಸಿದೆ.
ವಾಯುಭಾರ ಕುಸಿತದ ಪರಿಣಾಮ ಉತ್ತರ ಕರ್ನಾಟಕದಲ್ಲಿಯೂ ಮತ್ತೆ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆ, ಪ್ರವಾಹದಿಂದಾಗಿ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರಾವಳಿ ಭಾಗದಲ್ಲೂ ಕೂಡ ಅಕ್ಟೋಬರ್ 21 ಮತ್ರು 22ಕ್ಕೆ ಮಳೆಯಾಗುವ ಬಗ್ಗೆ ಹವಮಾನ ಇಲಾಖೆ ತಿಳಿಸಿದೆ.