ವಿಟ್ಲ: ಬೆಳ್ಳಂಬೆಳಗ್ಗೆಯೇ ಅಗ್ನಿ ದುರಂತ ➤ ಎರಡು ಅಂಗಡಿಗಳು ಭಸ್ಮ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 20. ಬೆಳ್ಳಂಬೆಳಗ್ಗೆ ಸಂಭವಿಸಿದ ಅಗ್ನಿಅವಘಡದಲ್ಲಿ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ.

ಇಲ್ಲಿನ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣದ ಬಳಿಯ ಕೆ.ಜೆ.ಟವರ್ಸ್ ನಲ್ಲಿರುವ ಎಂ.ಪಿ. ಹಾರ್ಡ್ ವೇರ್ ಮತ್ತು ಪೈಂಟ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದರಿಂದ ಅಂಗಡಿಗಳು ಸುಟ್ಟು ಕರಕಲಾಗಿವೆ. ಮೊದಲಿಗೆ ಪೈಂಟ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಪಕ್ಕದಲ್ಲಿದ್ದ ಬೇಕರಿಗೂ ಬೆಂಕಿ ವ್ಯಾಪಿಸಿದೆ.

ಇದನ್ನು ಗಮನಿಸಿದ ಸ್ಥಳೀಯರು ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಸ್ಥಳೀಯರು ಬೆಂಕಿ ನಂದಿಸುವುದಕ್ಕೆ ಮುಂದಾಗಿದ್ದರು. ಆದರೆ ಅಂಗಡಿಯ ಬಾಗಿಲು ಮಾತ್ರ ತೆರೆಯಲು ಅಸಾಧ್ಯವಾಗಿದ್ದು, ಪೈಂಟ್ಸ್ ಗೆ ಬೆಂಕಿ ತಗುಲಿದ್ದರಿಂದ ಬೆಂಕಿನ ಜ್ವಾಲೆ ಹೆಚ್ಚಾಗಿತ್ತು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿಗಳು ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Also Read  ಮಣಿಪಾಲದಲ್ಲಿ ಗುಡ್ಡ ಕುಸಿತ ➤ ಅಪಾಯದಲ್ಲಿ ಬಹುಮಹಡಿ ಅಂತಸ್ಥಿನ ಕಟ್ಟಡ

error: Content is protected !!
Scroll to Top