4 ವರ್ಷದ ಮಕ್ಕಳು ಸೇರಿ ಎಲ್ಲರಿಗೂ ಹೆಲ್ಮೆಟ್ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು/ಬೆಂಗಳೂರು . 20: ರಾಜ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಎಲ್ಲಾ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಹೆಲ್ಮೆಟ್ ಧರಿಸದಿದ್ದರೆ ಮೂರು ತಿಂಗಳು ಲೈಸೆನ್ಸ್ ರದ್ದು ಮಾಡಲಾಗುವುದು. ಹಳೆಯ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ನಿಯಮದ ಪ್ರಕಾರ, ನಾಲ್ಕು ವರ್ಷದ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ದ್ವಿಚಕ್ರವಾಹನದಲ್ಲಿ ಸಂಚರಿಸುವ ನಾಲ್ಕು ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕಿದೆ. ಹೆಲ್ಮೆಟ್ ಹಾಕದ ಚಾಲಕನಿಗೆ ದಂಡ ವಿಧಿಸುವ ಜೊತೆಗೆ ಚಾಲನಾ ಪರವಾನಿಗೆಯನ್ನು ಮೂರು ತಿಂಗಳ ಕಾಲ ಅಮಾನತುಗೊಳಿಸುವ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಮೋಟಾರು ವಾಹನ ಕಾಯ್ದೆಯ ಅನ್ವಯ ದ್ವಿಚಕ್ರವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ

Also Read  20,000 ಕೋಟಿ ದಾಟಿದ ಕೆನರಾ ಬ್ಯಾಂಕ್‌ ಜಾಗತಿಕ ವ್ಯವಹಾರ

error: Content is protected !!
Scroll to Top