ಜಮ್ಮು ಕಾಶ್ಮೀರದಲ್ಲಿ ಎಸ್‍ಐಯನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು.!

(ನ್ಯೂಸ್ ಕಡಬ) newskadaba.com ಜಮ್ಮು . 20: ಪೊಲೀಸ್ ಇನ್ಸ್ ಪೆಕ್ಟರ್ ಓರ್ವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ಬಿಜ್‍ಬೆಹರಾ ಪ್ರದೇಶದಲ್ಲಿ ನಡೆದಿದೆ.ಮೃತ ಇನ್ಸ್ ಪೆಕ್ಟರ್ ಅನ್ನು ಅನಂತ್‍ನಾಗ್ ಜಿಲ್ಲೆಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ.

ಅನಂತ್‍ನಾಗ್ ಜಿಲ್ಲೆಯ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದಾಗ ಮೊಹಮ್ಮದ್ ಅಶ್ರಫ್ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ.ಈ ಗುಂಡಿನ ದಾಳಿಯಲ್ಲಿ ಅಶ್ರಫ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಬಿಜ್‍ಬೆಹರಾ ಉಪ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯಲ್ಲಿ ಸಾವನ್ನಪ್ಪಿದ್ದಾರೆ. ಮೊಹಮ್ಮದ್ ಅಶ್ರಫ್ ಅವರು ಪ್ರಸ್ತುತ ಪುಲ್ವಾಮಾ ಜಿಲ್ಲೆಯ ಲೆಥ್‍ಪೊರಾದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

Also Read  ಕಡಬ: ಸರಸ್ವತೀ ವಿದ್ಯಾಲಯದ ಮೋಕ್ಷಿತ್ ಬಿ ಇನ್ ಸ್ಪೇರ್ ಅವಾರ್ಡ್ ಗೆ ಆಯ್ಕೆ

error: Content is protected !!
Scroll to Top