ಐಎಂಎ ವಂಚನೆ ಪ್ರಕರಣ ➤ ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

(ನ್ಯೂಸ್ ಕಡಬ) newskadaba.com ಬೆಂಗಳೂರು . 20: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಚಾರ್ಜ್‌ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಮೂವರು ಪೊಲೀಸ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಸೋಮವಾರ ಅಮಾನತುಗೊಳಿಸಿದೆ.

 

ಸಿಐಡಿ ಡಿವೈಎಸ್‌ಪಿ ಆಗಿದ್ದ ಇ.ಬಿ.ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದ ರಮೇಶ್, ಪಿಎಸ್‌ಐ ಗೌರಿಶಂಕರ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಅಮಾನತುಗೊಂಡ ಅಧಿಕಾರಿಗಳು ಐಎಂಎ ವಂಚನೆ ಪ್ರಕರಣದ ಬಗ್ಗೆ ಸಮರ್ಪಕವಾಗಿ ತನಿಖೆ ಮಾಡಿಲ್ಲ. ವಂಚನೆ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂಬ ಆರೋಪ ಇದೆ.

Also Read  ಶಾಸಕ ಸ್ಥಾನಕ್ಕೆ ಹಾಲಾಡಿ ಶ್ರೀನಿವಾಸ್ ಶೆಟ್ಟಿ ರಾಜೀನಾಮೆ ► ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ

error: Content is protected !!