ಹಾಸ್ಯ ನಟ ಚಿಕ್ಕಣ್ಣ ಉಪಾಧ್ಯಕ್ಷ ಚಿತ್ರದಲ್ಲಿ ನಾಯಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20: ಸ್ಯಾಂಡಲ್ ವುಡ್ ಹಾಸ್ಯನಟ ಚಿಕ್ಕಣ್ಣ ಇದೀಗ ಪೂರ್ಣಪ್ರಮಾಣದಲ್ಲಿ ನಾಯಕರಾಗುತ್ತಿದ್ದಾರೆ. ನಟ ಚಿಕ್ಕಣ್ಣ ಮೊದಲ ಬಾರಿಗೆ ಹೀರೋ ಆಗುತ್ತಿರುವ ಸಿನಿಮಾವನ್ನು ರಾಬರ್ಟ್ ನಿರ್ಮಾಪಕ ಉಮಾಪತಿ ಗೌಡ ನಿರ್ಮಿಸಲಿದ್ದು, ಚಂದ್ರ ಮೋಹನ್ ನಿರ್ದೇಶಿಸುತ್ತಿದ್ದಾರೆ. ಹಾಸ್ಯ ನಟ ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿರುವ ಉಪಾಧ್ಯಕ್ಷ ಸಿನಿಮಾದ ಮುಹೂರ್ತ ಸಮಾರಂಭ ಬೆಂಗಳೂರಿನಲ್ಲಿ ನಡೆದಿದೆ.

 

 

ಕೆಲ ವರ್ಷಗಳ ಹಿಂದೆ ಶರಣ್-ಚಿಕ್ಕಣ್ಣ ಕಾಂಬಿನೇಷನ್‌ನಲ್ಲಿ ಅಧ್ಯಕ್ಷ ಸಿನಿಮಾ ತೆರೆಕಂಡು, ಸೂಪರ್ ಹಿಟ್ ಎನಿಸಿಕೊಂಡಿತ್ತು. ಈ ಚಿತ್ರದಲ್ಲಿ ಶರಣ್ ಅಧ್ಯಕ್ಷನಾಗಿದ್ದರೆ, ಚಿಕ್ಕಣ್ಣ ಉಪಾಧ್ಯಕ್ಷನಾಗಿ ಮಿಂಚಿದ್ದರು. ಇದೀಗ ಚಿಕ್ಕಣ್ಣ ಹೀರೋ ಆಗಿರುವ ಸಿನಿಮಾದಲ್ಲಿ ಅದನ್ನೇ ಟೈಟಲ್ ಮಾಡಲಾಗಿದೆ. ಚಿಕ್ಕಣ್ಣ ಹೀರೋ ಆಗಿರುವ ಉಪಾಧ್ಯಕ್ಷ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಅತ್ತ ಚಿಕ್ಕಣ್ಣ ರಾಬರ್ಟ್‌, ಪೊಗರು, ಮದಗಜ’ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಲಿದ್ದು ಡಿಸೆಂಬರ್ ತಿಂಗಳಿನಲ್ಲಿ ಶೂಟಿಂಗ್ ಆರಂಭವಾಗಲಿದೆ.

Also Read  ಪುತ್ತೂರು: ಬಸ್ಸಿಗೆ ಕಲ್ಲೆಸೆತ

 

error: Content is protected !!
Scroll to Top