ತಾಯಿ – ಮಗಳು ನದಿಗೆ ಹಾರಿ ಆತ್ಮಹತ್ಯೆ ➤ ಮೊಮ್ಮಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಮೈಸೂರು, ಅ.20: ನಂಜನಗೂಡು ತಾಲ್ಲೂಕಿನ ಮಲ್ಲನಮೂಲೆ ಮಠ ಗ್ರಾಮದಲ್ಲಿ ತಾಯಿ ಹಾಗು ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅಕ್ಕಮ್ಮ (60), ರಶ್ಮಿ (35) ಎಂದು ಗುರುತಿಸಲಾಗಿದೆ.

 

 

ರಶ್ಮಿ ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ಡಿಸಿಸಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಆಕೆಯು ತಾಯಿ ಅಕ್ಕಮ್ಮ ಮತ್ತು ಮಗಳು ಮಿಂಚು ಅವರೊಂದಿಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಮೂವರೂ ಒಟ್ಟಿಗೆ ತೋಳುಗಳಿಗೆ ಬಟ್ಟೆ ಬಿಗಿದುಕೊಂಡು ನದಿಗೆ ಹಾರಿದ್ದಾರೆ. ಅಕ್ಕಮ್ಮನ ಮೊಮ್ಮಗಳು ಮಿಂಚುವನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅದೃಷ್ಟವಶಾತ್ ನಿಂದ ಮೊಮ್ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಆತ್ಮಹತ್ಯೆ ನಿರ್ಧಾರಕ್ಕೆ ನಿಖರ ಕಾರಣವೇನೆಂಬುದು ತಿಳಿದುಬಂದಿಲ್ಲ. ಈ ರೀತಿಯಾಗಿ ನಂಜನಗೂಡು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ…!

 

error: Content is protected !!
Scroll to Top