ಉಡುಪಿ: ನಿಲ್ಲಿಸಿದ್ದ ಕಾರಿಗೆ ರಿಕ್ಷಾ ಢಿಕ್ಕಿ ➤ ಆಟೋ ಚಾಲಕ ಮೃತ್ಯು



(ನ್ಯೂಸ್ ಕಡಬ) newskadaba.com ಉಡುಪಿ, ಅ.21: ನಾಗನಬೆಟ್ಟು ಗುಂಡಿಬೈಲು ಬಳಿ ನಿಲ್ಲಿಸಿದ್ದ ಕಾರಿಗೆ ಆಟೋರಿಕ್ಷಾ ಡಿಕ್ಕಿ ಹೊಡೆದು ಚಾಲಕ ಪ್ರಾಣ ಕಳೆದುಕೊಂಡ ಘಟನೆ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಮುನಬೆಟ್ಟು ಮೂಲದ ಸುನಿಲ್ (44) ಎಂದು ಗುರುತಿಸಲಾಗಿದೆ.





 

 

ಆಟೋರಿಕ್ಷಾ ಚಾಲನೆ ಮಾಡುವಾಗ ನಿಯಂತ್ರಣ ಕಳೆದುಕೊಂಡ ಸುನಿಲ್ ಅವರು ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.






 

error: Content is protected !!
Scroll to Top