ಕರ್ನಾಟಕ ಹಾಗೂ ದೇಶದಲ್ಲಿ ಇರುವ ಕೋವಿಡ್ ಕೇಸ್.!?

(ನ್ಯೂಸ್ ಕಡಬ) newskadaba.com ಬೆಂಗಳೂರು . 22: ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು,ಆರೋಗ್ಯ ಇಲಾಖೆಯ (ಅ.21) ವರದಿಯಂತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,838 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 77,06,946ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 5,872 ಹೊಸ ಕೊರೊನಾ ಪ್ರಕರಣಗಳು ಕಂಡು ಬಂದಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 702 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,16,616ಕ್ಕೆ ಏರಿಕೆಯಾಗಿದೆ.ಕಳೆದ 24 ಗಂಟೆಯಲ್ಲಿ 79,415 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಇನ್ನು  ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 7,82,773 ತಲುಪಿದ್ದು, ಇವರಲ್ಲಿ 6,71,618 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.

Also Read  ಉಡುಪಿ: ಆಯಾತಪ್ಪಿ ಕಾಲು ಜಾರಿ ನೀರಿಗೆ ಬಿದ್ದು ಮೀನುಗಾರ ಮೃತ್ಯು

 

error: Content is protected !!
Scroll to Top