ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ದತೆ

(ನ್ಯೂಸ್ ಕಡಬ) newskadaba.com ಮಂಗಳೂರು . 22: ಕೋವಿಡ್ 19 ಮಾರ್ಗ ಸೂಚಿಗಳ ನಡುವೆ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆಗಳನ್ನು ನಡೆಸಲು ಈಗಾಗಲೇ ಅಗತ್ಯವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಚುನಾವಣಾ ಆಯೋಗ ಹೈಕೋರ್ಟ್‍ಗೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾ.ಪಂ ಗಳಿಗೆ ಶೀಘ್ರವೇ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ವಿಧಾನಪರಿಷತ್ ಸದಸ್ಯ ಕೆ.ಸಿ ಕೊಂಡಯ್ಯ ಮತ್ತಿತರರು ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸಿದ ಸಿಜೆ ಎ ಎಸ್ ಓಕ್ ನೇತೈತ್ವದ ವಿಭಾಗೀಯ ಪೀಠಕ್ಕೆ ಚುನಾವಣಾ ಆಯೋಗದ ಪರವಾಗಿ ಹಿರಿಯ ವಕೀಲ ಕೆ. ಎನ್ . ಫಣೀಂದ್ರರವರು ಮಾಹಿತಿ ನೀಡಿದರು. ಇನ್ನು ಒಂದು ತಾಲೂಕಿನಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಸಲು ಯೋಜಿಸಲಾಗಿದೆ ಎಂದು ಆಯೋಗದ ಪರ ನ್ಯಾಯಾಪೀಠಕ್ಕೆ ತಿಳಿಸಿದರು.

Also Read  ಶಾಸಕ ಹರೀಶ್‌ ಪೂಂಜ ರವರಿಂದ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ

error: Content is protected !!
Scroll to Top