(ನ್ಯೂಸ್ ಕಡಬ) ಮಂಗಳೂರು, ಅ. 22. ಪ್ರಾಸ್ತಾವಿಕ ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕಲಾವಿದರ ಸಮಲೋಚನೆ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಉತ್ತರ ವಲಯ ಡಾ. ವೈ ಶಾಸಕ ಭರತ್ ಶೆಟ್ಟಿ, ಕಲಾವಿದರ ಸೂಚನೆ ಸಹಕಾರದೊಂದಿಗೆ ಸುಸಜ್ಜಿತ ರಂಗ ಮಂದಿರ ನಿರ್ಮಾಣವಾಗಲಿದ್ದು, ಆದಷ್ಟು ಬೇಗ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದರು. ಈ ಸಂಬಂಧ ಸಂಪೂರ್ಣ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಅಂತಿಮ ಬಜೆಟ್ ಅನ್ನು ತಯಾರಿಸಲು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ವೀಡಿಯೋ ಕಾನ್ಫರೆನ್ಸ್ ಮೂಲಕ ಕಲಾವಿದರೊಂದಿಗೆ ನೇರ ಮಾತನಾಡಿ ಮಾಹಿತಿ ಸಂಗ್ರಹಿಸಿದರು. ಆರ್ಕಿಟೆಕ್ಸ್ ಕುಮಾರ್ ಚಂದ್ರ ಪಿ.ಪಿ.ಟಿ. ಮೂಲಕ ಮಾಹಿತಿ ನೀಡಿದರು. ಕಾರ್ಪೊರೇಟರ್ ಲೋಹಿತ್ ಅಮೀನ್, ಮೂಡ ಆಯುಕ್ತ ದಿನೇಶ್ ಕುಮಾರ್, ಜಿಲ್ಲಾ ನಗರ ಅಭಿವೃದ್ಧಿ ಕೋಶ, ನಿರ್ದೇಶಕಿ ಗಾಯತ್ರಿ ನಾಯಕ್, ಕರ್ನಾಟಕ ಗೃಹ ಮಂಡಳಿಯ ಇಂಜಿನಿಯರ್ ಪ್ರದೀಪ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.