ಸರಳ ರೀತಿ ದೀಪಾವಳಿ ಆಚರಿಸಲು ದಕ್ಷಿಣ ಕನ್ನಡ ಡಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು . 22: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌-19 ಹಿನ್ನೆಲೆಯಲ್ಲಿ ಈ ವರ್ಷ ದೀಪಾವಳಿ ಹಬ್ಬವನ್ನು ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಸೂಕ್ತ ಮುಂಜಾಗ್ರತ ಕ್ರಮಗಳನ್ನು ಅನುಸರಿಸಿ ಆಚರಿಸಬೇಕು ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

ನ.14ರಿಂದ 17ರ ವರೆಗೆ ಜಿಲ್ಲಾದ್ಯಂತ ದೀಪಾವಳಿ ಹಬ್ಬ ಆಚರಿಸುವಾಗ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅವರು ಆದೆಶದಲ್ಲಿ ತಿಳಿಸಿದ್ದಾರೆ. ಅಧಿಕೃತ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ಸಿಡಿಮದ್ದುಗಳನ್ನು ಮಾರಾಟ ಮಾಡಬೇಕು. ಪಟಾಕಿ ಮಾರಾಟದ ಮಳಿಗೆಗಳನ್ನು ನ.1ರಿಂದ ನ.17ರ ವರೆಗೆ ಮಾತ್ರ ತೆರೆದಿರಬೇಕು.

Also Read  ಪಡುಕೋಣೆ ಶ್ರೀ ರಾಮ ದೇವಸ್ಥಾನದಲ್ಲಿ ಕಳ್ಳತನ ➤ 1.5 ಲಕ್ಷ ಮೌಲ್ಯದ ಪ್ರಭಾವಳಿ ಕಳವು

ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್‌ ಹಾಗೂ ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಕಲ್ಪಿಸಬೇಕು.ಎಂದಿದ್ದಾರೆ ಕೋವಿಡ್‌-19 ಸಾಂಕ್ರಾಮಿಕ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು.ನಿಯಮ ಪಾಲಿಸದಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುತ್ತದೆ.ಎಂದು ದಕ್ಷಿಣ ಕನ್ನಡ ಡಿಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

error: Content is protected !!
Scroll to Top