ನ.1 ರಿಂದ ಉಡುಪಿಯ ಗ್ರಾಮೀಣ ಭಾಗದಲ್ಲಿ ಪ್ಲಾಸ್ಟಿಕ್‌ ನಿಷೇಧ ಜಾರಿ

(ನ್ಯೂಸ್ ಕಡಬ) newskadaba.com ಉಡುಪಿ . 22: ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ನ.1 ರಿಂದ ಕಡ್ಡಾಯವಾಗಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿ ಪಿಡಿಓಗಳು ಹಾಗೂ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ದಿನಕರ ಬಾಬು ಸೂಚಿಸಿದ್ದಾರೆ.

ಅವರು ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪ್ಲಾಸ್ಟಿಕ್‌ಗೆ ಪರ್ಯಾಯ ವಸ್ತುಗಳು ಇದ್ದರೂ ಸಹ ಅವುಗಳ ಬಳಕೆ ನಡೆಯುತ್ತಿಲ್ಲ, ಆದ್ದರಿಂದ ನ.1 ರಿಂದ ಪ್ಲಾಸ್ಟಿಕ್‌ ಬಳಸುವವರ ವಿರುದ್ಧ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಕಡ್ಡಾಯವಾಗಿ ದಂಡ ವಿಧಿಸಬೇಕು. ಈ ಬಗ್ಗೆ ಗ್ರಾಮಗಳಲ್ಲಿ ಇಂದಿನಿಂದಲೇ ಜಾಗೃತಿ ಮೂಡಿಸುವಂತೆ ಅವರು ಅಧಿಕಾರಿಗಳನ್ನು ಎಚ್ಚರಿಸಿದರು.

 

Also Read  ಪತ್ರಕರ್ತನ ಮನೆಯ ಮುಂದೆ ಗುಂಡು ಸೂಜಿ ಚುಚ್ಚಿದ ಸೌತೆಕಾಯಿ ► ವಾಮಾಚಾರ ಮಾಡಿರುವ ಶಂಕೆ

 

 

 

error: Content is protected !!
Scroll to Top