ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಕಾರ್ಯಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 23. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್‍ ಮಸಾಲ ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್-19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಂಭವ ಹೆಚ್ಚಾಗಿರುವ ಕಾರಣ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅನುಷ್ಠಾಣಾಧಿಕಾರಿ ಡಾ. ಜಗದೀಶ್ ಹಾಗೂ ಪೊಲೀಸ್ ಇಲಾಖೆಯ ನೇತೃತ್ವದ ತಂಡವು ಅಕ್ಟೋಬರ್ 20 ರಂದು ನಗರದ ಬರ್ಕೆ, ಬಲ್ಲಾಲ್ ಬಾಗ್, ಮಣ್ಣಗುಡ್ಡ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿ ಸೆಕ್ಷನ್ 4, 6ಎ ಹಾಗೂ 6ಬಿ ಪ್ರಕಾರ  31 ಕೇಸ್ ದಾಖಲಿಸಿ ಸುಮಾರು ರೂ.3150 ದಂಡ ವಿಧಿಸಲಾಯಿತು ಹಾಗೂ ಕಾಯಿದೆ ಕುರಿತಂತೆ ಅಂಗಡಿ ಹಾಗೂ ಹೋಟೇಲ್ ಮಾಲಿಕರಿಗೆ ಮಾಹಿತಿ ನೀಡಲಾಯಿತು.

Also Read  ಪುತ್ತೂರು: ಅಕ್ರಮ ಜಿಂಕೆಯ ಕೊಂಬು ಸಾಗಾಟ ➤ ಓರ್ವ ಆರೋಪಿ ಅರೆಸ್ಟ್


ಸಮಾಜ ಕಾರ್ಯಕರ್ತೆ ಶ್ರುತಿ ಸಾಲ್ಯಾನ್, ವಿಜಯ್‍ ಕುಮಾರ್, ಬರ್ಕೆ ಠಾಣಾ ಪೊಲೀಸ್ ಸಿಬ್ಬಂದಿ ಪರಶುರಾಮ್ ಹಾಗೂ ವಿದ್ಯಾರವರು ಕಾರ್ಯಚರಣೆಯಲ್ಲಿ ಉಪಸ್ಥಿತರಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top