ಅ.31ರಂದು ಮಂಗಳೂರು ವಿಮಾನ ನಿಲ್ದಾಣ ಅದಾನಿ ಕಂಪೆನಿಗೆ ಹಸ್ತಾಂತರ

(ನ್ಯೂಸ್ ಕಡಬ) newskadaba.com  ಮಂಗಳೂರು . 23: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅ. 31ರಂದು ನಿರ್ವಹಣೆ, ಅಭಿವೃದ್ಧಿ ಹಾಗೂ ಕಾರ್ಯಾಚರಣೆಗಾಗಿ ಗುತ್ತಿಗೆ ಪಡೆದಿರುವ ಗೌತಮ್ ಅದಾನಿ ಒಡೆತನದ ಅದಾನಿ ಸಮೂಹ ಸಂಸ್ಥೆಗೆ ಹಸ್ತಾಂತರವಾಗಲಿದೆ.

ಈ ಸಂಬಂಧ ಅದಾನಿ ಮಂಗಳೂರು ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ಕಂಪೆನಿ ಜತೆ ವಿಮಾನ ಯಾನ ಸಚಿವಾಲಯದ ಒಪ್ಪಂದವು ಗುರುವಾರ ಆಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕೃತವಾಗಿ ಪ್ರಕಟಿಸಿದೆ. ಈ ಒಪ್ಪಂದದಂತೆ ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ಅದಾನಿ ಕಂಪೆನಿ ನಿರ್ವಹಿಸಲಿದೆ. ಕೆಲ ತಿಂಗಳ ಕಾಲ ವಿಮಾನ ನಿಲ್ದಾಣದ ನಿರ್ದೇಶಕರು ಮುಂದುವರಿಯಲಿದ್ದು, ಬಳಿಕ ಅದಾನಿ ಕಂಪೆನಿಯು ಮುಖ್ಯಸ್ಥ ಹುದ್ದೆಗೆ ತನ್ನ ಅಧಿಕಾರಿಯನ್ನು ನಿಯೋಜಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಕಾರದಿಂದ ನಿರ್ವಹಣೆಗೊಳ್ಳುತ್ತಿದ್ದ ವಿಮಾನ ನಿಲ್ದಾಣವನ್ನು ಸಾರ್ವಜನಿಕ ಖಾಸಗಿ ಪಾಲುದಾರಿಕೆಯಲ್ಲಿ ಸರಕಾರ ಅದಾನಿ ಗ್ರೂಪ್‌ಗೆ 50 ವರ್ಷಗಳ ಅವಧಿಗೆ ಗುತ್ತಿಗೆ ನೀಡಿದೆ.

Also Read  ಕೆಲಸದ ವೇಳೆ ಕುಸಿದುಬಿದ್ದು ಕಾರ್ಮಿಕ ಸಾವು: ಮೃತದೇಹವನ್ನು ರಸ್ತೆ ಬದಿ ಇಟ್ಟು ಹೋದ ದುರುಳ

ಅದಾನಿ ಸಂಸ್ಥೆಗೆ ಪೂರ್ಣವಾಗಿ ಹಸ್ತಾಂತರವಾದ ಬಳಿಕ ವಿಮಾನ ಆಗಮನ-ನಿರ್ಗಮನದ ಉಸ್ತುವಾರಿ ಮಾತ್ರ ಪ್ರಾಧಿಕಾರ ನೋಡಿಕೊಳ್ಳಲಿದೆ. ಹೀಗಾಗಿ ಎಟಿಸಿ (ಏರ್ ಟ್ರಾಫಿಕ್ ಕಂಟ್ರೋಲ್) ಹಾಗೂ ಕಮ್ಯುನಿಕೇಶನ್ ಆ್ಯಂಡ್ ನೇವಿಗೇಶನ್ ಸೆಂಟರ್‌ಗೆ ಪ್ರಾಧಿಕಾರವೇ ಉಸ್ತುವಾರಿ ನೋಡಿಕೊಳ್ಳಲಿದೆ. ಉಳಿದಂತೆ ಭದ್ರತಾ ಸಿಬ್ಬಂದಿ ಹಾಗೂ ಏರ್‌ಲೈನ್ ಸಿಬಂದಿ ಹೊರತುಪಡಿಸಿ ಟರ್ಮಿನಲ್ ಕಟ್ಟಡ, ರನ್ ವೇ, ಎಲೆಕ್ಟ್ರಿಕಲ್, ಸಿವಿಲ್ ಸೇರಿದಂತೆ ಎಲ್ಲ ವಿಚಾರವನ್ನು ಅದಾನಿ ಸಂಸ್ಥೆ ನಿರ್ವಹಿಸಲಿದೆ.

Also Read  ರೇಣುಕಾಸ್ವಾಮಿ ಕೊಲೆ ಪ್ರಕರಣ ಸೆ.30ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

 

error: Content is protected !!
Scroll to Top