ಉಡುಪಿ : ನಾಲ್ವರು ಅಂತರರಾಜ್ಯ ಕಳ್ಳರ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, . 23: ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನಾಭರಣ, ನಗದು ದೋಚಿ ಪರಾರಿಯಾಗುತ್ತಿದ್ದ ಇರಾನಿ ಗ್ಯಾಂಗ್‌ನ ನಾಲ್ವರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ.ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಆರೋಪಿಗಳು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಡುಪಿ ಡಿಸಿಐಬಿ ಇನ್‌ಸ್ಪೆಕ್ಟರ್ ಡಿ.ಆರ್. ಮಂಜಪ್ಪ ನೇತೃತ್ವದ ತಂಡ ದಾಳಿ ನಡೆಸಿ ಅಂತರರಾಜ್ಯ ಕಳ್ಳರನ್ನು ಬಂಧಿಸಿದೆ.

ಮಹಾರಾಷ್ಟ್ರದ ಅಹಮದ್ ನಗರ ಜಿಲ್ಲೆಯ ಇರಾನಿ ಮೊಹಲ್ಲಾದ ಜಾಕೀರ್ ಹುಸೇನ್‌, ಶ್ರೀರಾಮಪುರದ ಕಂಬರ್, ಸಂಜಯ್ ನಗರದ ಅಕ್ಷಯ್ ಗೋಸಾವಿ, ಸೈನಿಕ್‌ ನಗರದ ಶಾರುಖ್‌ ಬಂಧಿತರು. ಎಲ್ಲರೂ ಮಹಾರಾಷ್ಟ್ರದವರಾಗಿದ್ದು, ದೆಹಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಹಲವೆಡೆ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಬೈಕ್‌,  5,100 ವಶಕ್ಕೆ ಪಡೆಯಲಾಗಿದೆ. ಕದ್ದ ಚಿನ್ನಾಭರಣಗಳನ್ನು ಮಾರಾಟ ಮಾಡಿದ್ದ ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ಶ್ರೀರಾಂಪುರದ ಚಿನ್ನದ ಅಂಗಡಿಯಿಂದ 65 ಗ್ರಾಂ ಚಿನ್ನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಒಟ್ಟು  7 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಳಾಗಿದೆ ಎಂದು ಪೊಲೀಸರು ತಿಳಿಸಿದರು.

Also Read  ಕುಂತೂರು: ಮಾರ್- ಇವಾನಿಯೋಸ್ ಕಾಲೇಜಿನಲ್ಲಿ 'ಅಝಾದಿ ಕಾ ಅಮೃತ್ ಮಹೋತ್ಸವ' ಸ್ಪರ್ಧಾ ಕಾರ್ಯಕ್ರಮ

 

error: Content is protected !!
Scroll to Top