ಮೆಡಿಕಲ್ ಶಾಪ್ ನಲ್ಲಿ ಅಮಲು ಮಾತ್ರೆಗಳು ಪತ್ತೆ ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಡಿಕೇರಿ, . 24. ಅಮಲೇರುವ ಮಾತ್ರೆಗಳನ್ನು ಮೆಡಿಕಲ್ ಶಾಪ್ ಮಾಲೀಕರ ಸಹಕಾರದೊಂದಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಡಿಸಿಐಬಿ ಘಟಕದ ಅಧಿಕಾರಿಗಳು ಹಾಗೂ ಸಿಬ್ದಂದಿಗಳು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಗೋಣಿಕೊಪ್ಪದ ಹೆಚ್.ಆರ್.ಸುಮನ್ ಹಾಗೂ ಜೀವನ್ ಹೆಚ್.ಎಸ್ ಎಂದು ಗುರುತಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಗಾಂಜಾ ಹಾಗೂ ಡ್ರಗ್ಸ್ ಮತ್ತಿತರ ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆಯು ನಿಯಂತ್ರಣಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಮಾದಕ ವ್ಯಸನಿಗಳಾಗಿದ್ದ ಯುವಕರು ಅಮಲು ಮಾತ್ರೆಗಳನ್ನು ಮೆಡಿಕಲ್ ಶಾಪ್ ಗಳಿಂದ ಖರೀದಿಸಿ ಬಳಕೆ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದಲ್ಲದೇ ಕಾಲೇಜು ವಿದ್ಯಾರ್ಥಿಗಳಿಗೂ ಮಾರಾಟ ಮಾಡುತ್ತಿರುವ ಬಗ್ಗೆ ಆರೊಪಗಳು  ಕೇಳಿ ಬಂದಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಡಿಸಿಐಬಿ ಘಟಕದ ಪೊಲೀಸರು ಗೋಣಿಕೊಪ್ಪಲಿನ ಮೆಡಿಕಲ್ ಶಾಪ್ ವೊಂದರಿಂದ ನಶೆಯೇರುವ ಮಾತ್ರೆಗಳನ್ನು ಖರೀದಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಮಾತ್ರೆಗಳ ಬಾಕ್ಸ್ ಸಹಿತ ವಶಕ್ಕೆ ಪಡೆದಿದ್ದಾರೆ.

Also Read  ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಹಿನ್ನೆಲೆ ➤ ಕಡಬ ಪೇಟೆಯಲ್ಲಿ ಪೊಲೀಸರಿಂದ ಪಥಸಂಚಲನ

error: Content is protected !!
Scroll to Top