ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಢ ➤ ಐವರು ಮೃತ್ಯು

(ನ್ಯೂಸ್ ಕಡಬ) ಮದುರೈ, ಅ. 24. ಇಲ್ಲಿನ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿ, ಐವರು ಮೃತಪಟ್ಟು ಮೂವರಿಗೆ ಗಂಭೀರ ಗಾಯಗೊಂಡ ಘಟನೆ ಮಧುರೈ ಯಲ್ಲಿ ನಡೆದಿದೆ.

 

ಕಲ್ಲುಪಟ್ಟಿ ಪ್ರದೇಶದ ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಭಾರೀ ಸ್ಫೋಟ ಸಂಭವಿಸಿತ್ತು, ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟರೆ, ತೀವ್ರ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕವಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

Scroll to Top