ಬೆಂಗಳೂರು ನಗರದಾದ್ಯಂತ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, . 24: ಬೆಂಗಳೂರು ನಗರದಾದ್ಯಂತ ಭಾರಿ ಮಳೆ ಸುರಿದ ಹಿನ್ನಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಜನರು ಮನೆಮಠ ಕಳೆದುಕೊಂಡು ಪರದಾಡುತ್ತಿದ್ದಾರೆ.ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ನಗರವೇ ನಲುಗಿ ಹೋಗಿದೆ.

 

ಅಲ್ಲದೇ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ. ಈ ಹಿನ್ನಲೆಯಲ್ಲಿ ಬಿಬಿಎಂಪಿ ಕಮಿಷನರ್ ಗೆ ಸಿಎಂ ಬಿಎಸ್ ಯಡಿಯೂರಪ್ಪ ಕರೆ ಮಾಡಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವಂತೆ ಸೂಚಸಿದ್ದಾರೆ. ಅಲ್ಲದೇ ಇನ್ನೂ 2 ದಿನ ಬಾರೀ ಮಳೆ ಹಿನ್ನಲೆ ಎಚ್ಚರ ವಹಿಸಿ ಎಂದು ಮುನ್ನೆಚ್ಚರಿಕೆ ಕ್ರಮಕ್ಕೆ ಸಿಎಂ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.

Also Read  ಸಾಪಿಯೆನ್ಶಿಯಾ ಪ್ರಥಮ ದರ್ಜೆ ಕಾಲೇಜು ನೆಲ್ಯಾಡಿ ➤ ಮಾಹಿತಿ ಕಾರ್ಯಾಗಾರ

 

error: Content is protected !!
Scroll to Top