ಕ್ರಿಕೆಟ್ ಕ್ಷೇತ್ರದ ದಿಗ್ಗಜ ಕಪಿಲ್ ದೇವ್ ಆರೋಗ್ಯದಲ್ಲಿ ಚೇತರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ . 24: ಭಾರತಕ್ಕೆ ಮೊಟ್ಟ ಮೊದಲ ವಿಶ್ವಕಪ್ ಗೆದ್ದುಕೊಟ್ಟ ಕ್ರಿಕೆಟ್ ತಂಡದ ಕ್ಯಾಪ್ಟನ್ ಆಗಿದ್ದ ಕಪಿಲ್ ದೇವ್ ನಿನ್ನೆ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಕಪಿಲ್ ದೇವ್ ಗೆ ಹೃದಯಾಘಾತಕ್ಕೊಳಗಾದ ಸುದ್ದಿ ತಿಳಿಯುತ್ತಿದ್ದಂತೇ ವಿರಾಟ್ ಕೊಹ್ಲಿ ಸೇರಿದಂತೆ ಹಾಲಿ-ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಚೇತರಿಕೆಗೆ ಪ್ರಾರ್ಥಿಸಿದ್ದಾರೆ. ಚಿಕಿತ್ಸೆ ಬಳಿಕ ಸ್ವತಃ ಕಪಿಲ್ ತಮಗೆ ಶುಭ ಹಾರೈಸಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅಲ್ಲದೆ, ತಾವೀಗ ಚೇತರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.ತಮ್ಮ ಮಗಳ ಜೊತೆಗೆ ಕಪಿಲ್ ದೇವ್ ಖುಷಿಯಿಂದ ಆಸ್ಪತ್ರೆಯ ಬೆಡ್ ಮೇಲೆ ಕುಳಿತಿರುವ ಫೋಟೋವನ್ನು ಟ್ವಿಟ್ಟರ್​ನಲ್ಲಿ ಶೇರ್ ಮಾಡಲಾಗಿದೆ ಗುರುವಾರ ಮಧ‍್ಯರಾತ್ರಿ ಅವರಿಗೆ ಹೃದಯಾಘಾತವಾಗಿತ್ತು. ಸದ್ಯಕ್ಕೆ ದೆಹಲಿಯ ಪೋರ್ಟಿಸ್ ಎಸ್ಕಾರ್ಟ್ ಹಾರ್ಟ್ ಇನ್ಸ್ಟಿಟ್ಯೂಟ್ ಗೆ ದಾಖಲಿಸಲಾಗಿದೆ.

Also Read  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ - ಕಾಂತಾರ ಅಭಿನಯಕ್ಕಾಗಿ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

 

 

error: Content is protected !!
Scroll to Top