ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಈದ್ ಮೀಲಾದ್ ಮಾರ್ಗಸೂಚಿ ➤ ಮೆರವಣಿಗೆ, ಗುಂಪು ಸೇರುವಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸದಂತೆ ಜಿಲ್ಲಾಧಿಕಾರಿ ಸೂಚನೆ – News Kadaba

ಈದ್ ಮೀಲಾದ್ ಮಾರ್ಗಸೂಚಿ ➤ ಮೆರವಣಿಗೆ, ಗುಂಪು ಸೇರುವಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸದಂತೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 25. ದ.ಕ.ಜಿಲ್ಲೆಯಲ್ಲಿ ಅ.29 ರಂದು ನಡೆಯಲಿರುವ ಈದ್ ಮಿಲಾದ್ ಪ್ರಯುಕ್ತ ಕೊರೋನಾ ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲಾಧಿಕಾರಿಯವರು ಮಾರ್ಗಸೂಚಿಯೊಂದನ್ನು ಪ್ರಕಟಿಸಿದ್ದು, ಮೆರವಣಿಗೆ, ಗುಂಪು ಸೇರುವಿಕೆ, ಧಾರ್ಮಿಕ ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ನಡೆಸದಂತೆ ಆದೇಶ ಹೊರಡಿಸಿದ್ದಾರೆ.


ಈ ಕಾರ್ಯಕ್ರಮದ ಸಂದರ್ಭ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಮಸೀದಿಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ/ಸಾಂಸ್ಕೃತಿಕ ಕಾರ್ಯಕ್ರಮಗಳು ಮಾಡಬಾರದು. ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ/ಡಿಜಿಟಲ್/ ಸೌಂಡ್ ಸಿಸ್ಟಮ್ ಬಳಸಬಾರದು. ಕಬರ್ ಸ್ಥಾನ ಸಹಿತ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನಕ್ಕೂ ಅವಕಾಶಗಳಿಲ್ಲ. ಮಸೀದಿ- ದರ್ಗಾಗಳಲ್ಲಿ ಸುರಕ್ಷಿತ ಅಂತರ ಕಾಪಾಡಬೇಕು. ಮಾಸ್ಕ್ ಅನ್ನು ಕಡ್ಡಾಯವಾಗಿ ಉಪಯೋಗಿಸಬೇಕು. 60 ವರ್ಷ ಮೇಲ್ಪಟ್ಟ ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಆಚರಿಸಬೇಕು. ಸ್ಯಾನಿಟೈಸರ್ ಹಾಗೂ ಸೋಪಿನೊಂದಿಗೆ ಕೈ ತೊಳೆಯಲು ಪ್ರವೇಶದ್ವಾರದಲ್ಲಿ ಸೂಕ್ತ ವ್ಯವಸ್ಥೆ ಮಾಡಬೇಕು. ವೈಯಕ್ತಿಕವಾಗಿ 6 ಅಡಿ ಸುರಕ್ಷಿತ ಅಂತರವನ್ನು ಕಡ್ಡಾಯವಾಗಿ ಕಾಪಾಡಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Scroll to Top