ಕರ್ನಾಟಕದಲ್ಲಿ ಇಂದಿನಿಂದ 2 ದಿನ ಮಳೆಯ ಅಬ್ಬರ ➤ ಕರಾವಳಿಯಲ್ಲಿ ಹಳದಿ ಅಲರ್ಟ್​ ಘೋಷಣೆ

(ನ್ಯೂಸ್ ಕಡಬ) newskadaba.com ಕರಾವಳಿ . 25: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಮಳೆ ಅಬ್ಬರಿಸಿದೆ. ಇಂದಿನಿಂದ 2 ದಿನ ಮತ್ತೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ.

ಇಂದು ಮತ್ತು ನಾಳೆ ಕರ್ನಾಟಕದ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಕೇರಳದ ಹಲವೆಡೆ ಮಳೆಯಾಗುತ್ತಿರುವುದರಿಂದ ಅದರ ಪರಿಣಾವಾಗಿ ಕರ್ನಾಟಕದ ಕರಾವಳಿಯಲ್ಲೂ ಮಳೆ ಹೆಚ್ಚಾಗಲಿದೆ.  ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆ ಅ. 26ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

Also Read  ಪಂಜ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪದ್ಮನಾಭ ರೈ ಆಯ್ಕೆ

ಹೀಗಾಗಿ, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಇಂದು ಮಳೆಯಾಗುವ ನಿರೀಕ್ಷೆ ಇದೆ. ಅಕ್ಟೋಬರ್ 27, 28ರಂದು ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಹಾವೇರಿ ಗದಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಕೊಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ನಿರೀಕ್ಷೆಯಿದೆ.

error: Content is protected !!
Scroll to Top