(ನ್ಯೂಸ್ ಕಡಬ) newskadaba.com ಮಂಗಳೂರು, ಅ. 25. ಬಸ್ಸಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಘಟನೆ ನಡೆದ ಗಂಟೆಯೊಳಗೆ ಪತ್ತೆ ಹಚ್ಚಿರುವ ಪೊಲೀಸರು ಓರ್ವ ಆರೋಪಿ, ಬೈಕ್ ಹಾಗೂ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಸಹಕರಿಸಿದ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ದೇರಕಳಕಟ್ಟೆ ಎಂಬಲ್ಲಿ ನಡೆದಿದೆ.
ಓರ್ವ ಆರೋಪಿ ಅಲ್ಫಾಝ್ ಕಲ್ಪಾದೆ ಎಂಬಾತನು ಪೊಲೀಸ್ ವಶದಲ್ಲಿದ್ದು, ಇನ್ನೊರ್ವ ಆರೋಪಿ ಪೊಂಗ ಅಶ್ರಫ್ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮಂಗಳೂರಿನಿಂದ ವಿಟ್ಲ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಒಂದಕ್ಕೆ ಸೈಡ್ ಕೊಡುವ ವಿಚಾರದಲ್ಲಿ ನಿತ್ಯಾನಂದ ನಗರದಿಂದ ದೇರಳಕಟ್ಟೆವರೆಗೆ ಬೈಕ್ ಸವಾರರಿಗೆ ಮತ್ತು ಬಸ್ ಚಾಲಕನ ಮದ್ಯೆ ಮಾತಿನ ಚಕಮಕಿ ನಡೆದಿತ್ತು. ದೇರಳಕಟ್ಟೆ ಬಳಿ ಬೈಕ್‌ನಲ್ಲಿ ಬಂದಿದ್ದ ಇಬ್ಬರು ಬಸ್ಸಿಗೆ ಕಲ್ಲು ಎಸೆದು ಪರಾರಿಯಾಗಿದ್ದರು. ಕಲ್ಲು ಬಸ್ಸಿನೊಳಗೆ ಬಿದ್ದು ಗಾಜು ಪುಡಿಯಾಗಿದ್ದು ಬಸ್ ಚಾಲಕನಿಗೆ ಯಾವುದೇ ತೊಂದರೆಯಾಗದೆ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.