ಮಡಿಕೇರಿ ದಸರಾ ಉತ್ಸವಕ್ಕೆ ಕೊರೊನಾ ಸೂತಕದ ಛಾಯೆ ➤ ಇಂದು ರಾತ್ರಿ ಸಾಂಪ್ರದಾಯಿಕ ಮೆರವಣಿಗೆ

(ನ್ಯೂಸ್ ಕಡಬ) newskadaba.com ಮಡಿಕೇರಿ, ಅ.26. ಮೈಸೂರು ದಸರಾದಷ್ಟೇ ಖ್ಯಾತಿ ಪಡೆಯುತ್ತಿದ್ದ ಮಡಿಕೇರಿ ದಸರಾ ಉತ್ಸವಕ್ಕೆ ಈ ಬಾರಿ ಕೊರೊನಾ ಸೂತಕದ ಛಾಯೆ ಆವರಿಸಿದೆ. ಸಾಂಪ್ರದಾಯಿಕ ದಸರಾ ಆಚರಣೆಗೆ ಮಡಿಕೇರಿಯಲ್ಲಿ ತಯಾರಿ ನಡೆದಿದ್ದು, ಇಂದು ರಾತ್ರಿ ದಶದೇವಾಲಯಗಳ ಕಿರು ಮಂಟಪಗಳ ಸಾಂಪ್ರದಾಯಿಕ ಮೆರವಣಿಗೆ ನಡೆಯಲಿದೆ.

 

 

ಶಕ್ತಿದೇವತೆಗಳೂ ಸೇರಿದಂತೆ ಮಡಿಕೇರಿಯ ದಶದೇವಾಲಯಗಳಲ್ಲಿ ಮೆರವಣಿಗೆಗೆ ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದ್ದು, ಇದೇ ಮೊದಲ ಬಾರಿಗೆ ಅತ್ಯಂತ ಸರಳವಾಗಿ, ಜನರೇ ಸೇರದ ರೀತಿಯಲ್ಲಿ ನಾಡಹಬ್ಬದ ಆಚರಣೆಯಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಹೆಚ್ಚು ಜನರು ಸೇರದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಸರಳ ದಸರಾ ಆಚರಿಸುವುದಾಗಿ ದಸರಾ ಸಮಿತಿಯಿಂದ ನಿಧಾ೯ರ ಕೈಗೊಂಡಿದ್ದು, ಸಾವ೯ಜನಿಕರು ಸಹಕರಿಸುವಂತೆ ಸಮಿತಿ ಮನವಿ ಮಾಡಿದೆ.

Also Read  ಮಂಗಳೂರು ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

 

error: Content is protected !!
Scroll to Top