ಕಲ್ಲಿದ್ದಲು ಹಗರಣ : ಕೇಂದ್ರದ ಮಾಜಿ ಸಚಿವನಿಗೆ ಮೂರು ವರ್ಷ ಜೈಲು

(ನ್ಯೂಸ್ ಕಡಬ) newskadaba.com ನವದೆಹಲಿ . 26: 1999ರ ಜಾರ್ಖಂಡ್​ನಲ್ಲಿ ನಡೆದಿದ್ದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರಿಗೆ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ. ಆರೋಪ ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಕಳೆದ ವಾರ ಕೋರ್ಟ್​ ಇವರನ್ನು ಅಪರಾಧಿ ಎಂದು ಘೋಷಿಸಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿರಲಿಲ್ಲ. ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗಿದ್ದು, ಮೂರು ವರ್ಷ ಶಿಕ್ಷೆ ವಿಧಿಸಲಾಗಿದೆ.

ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ. ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ರೇ ಅವರು ಕಲ್ಲಿದ್ದಲು ಇಲಾಖೆಯ ರಾಜ್ಯ ಸಚಿವರಾಗಿದ್ದರು. ದಿಲೀಪ್​ ರೇ ಜತೆ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್,  ಸಿಟಿಎಲ್ ನ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್​ವಾಲ್​ ಅವರಿಗೂ ಮೂರು ವರ್ಷ ಶಿಕ್ಷೆ ವಿಧಿಸಲಾಗಿದೆ.

Also Read  ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ- ಸಿಜೆಐ ಚಂದ್ರಚೂಡ್

error: Content is protected !!
Scroll to Top