ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಮನೆ

(ನ್ಯೂಸ್ ಕಡಬ) newskadaba.com ಧಾರವಾಡ, ಅ. 26. ಆಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮನೆಯೊಂದು ಸುಟ್ಟು ಕರಕಲಾದ ಘಟನೆ ಧಾರವಾಡದ ಮಾಳಮಡ್ಡಿ ಎಂಬಲ್ಲಿ ನಡೆದಿದೆ.

ಮಹಿಷಿ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಅವರು ಮಧ್ಯಾಹ್ನ ರಾಯರ ಮಠಕ್ಕೆ ಊಟಕ್ಕೆ ಹೋದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಮನೆಯಲ್ಲೆಡೆ ಬೆಂಕಿ ಆವರಿಸಿಕೊಂಡಿದೆ ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಬಗ್ಗೆ ಸ್ಥಳೀಯ ನಿವಾಸಿಗಳು ವಿದ್ಯಾಗಿರಿ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಗೆ ಮಾಹಿತಿ ನೀಡಿದ್ದು, ತಕ್ಷಣ ಧಾವಿಸಿದ ಇವರು ಬಂದು ಬೆಂಕಿ ನಂದಿಸುವಲ್ಲಿ ಹರಸಾಹಸಪಟ್ಟರು.

Also Read  ಶಿಕ್ಷಿತರು ತಮ್ಮ ಜ್ಞಾನ ಧಾರೆ ಎರೆಯಬೇಕು- ಮಮತಾ ಗಟ್ಟಿ

error: Content is protected !!
Scroll to Top