ಪೇಜಾವರ ಶ್ರೀಗಳಿಂದ ಧರ್ಮಾಧಿಕಾರಿ ಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ . 26: ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶನಿವಾರ ಧರ್ಮಸ್ಥಳಕ್ಕೆ ಬಂದು ಪಟ್ಟಾಭಿಷೇಕದ 53 ನೇ ವರ್ಷದ ವರ್ಧಂತಿ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಿ ಅಭಿನಂದಿಸಿದರು.

ಇನ್ನು ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 21 ಕೋಟಿ ರೂಪಾಯಿ ವೆಚ್ಚದಲ್ಲಿ 20,000 ಟ್ಯಾಬ್ ಗಳನ್ನು ಹಾಗೂ 10000 ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುವುದು. 15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರ ಶ್ರೀ” ಯೋಜನೆಯಡಿ ಕೃಷಿಕರಿಗಾಗಿ ಯಂತ್ರಗಳನ್ನು ಖರೀದಿಸಿ ಕೃಷಿಗೆ ಪ್ರೋತ್ಸಾಹ ನೀಡಿ ಎಂಟು ಸಾವಿರ ಎಕರೆ ಪ್ರದೇಶದಲ್ಲಿ ಕೃಷಿಗೆ ಕಾಯಕಲ್ಪ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು.

Also Read  ಕಡಬ: ಗರ್ಭಿಣಿಯಾದ ಏಳನೇ ತರಗತಿಯ ವಿದ್ಯಾರ್ಥಿನಿ ► ಅತ್ಯಾಚಾರಗೈದ ಆರೋಪಿ ಫೋಕ್ಸೋ ಕಾಯ್ದೆಯಡಿ ಬಂಧನ

 

error: Content is protected !!
Scroll to Top