ಬೈಕ್‌ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.26. ತಾಲೂಕಿನ ರಾಷ್ಟ್ರೀಯ ಹೆದ್ದಾರಿ-7ರ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

 

ಮೃತಪಟ್ಟವರನ್ನು ಬೆಂಗಳೂರಿನ ಕೆ.ಆರ್.ಪುರಂನ ಲಿಂಗಪ್ಪ (28), ಉಮೇಶ್ (30) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯನ್ನು ನಂದಿ ಗಿರಿಧಾಮ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್‌ ಗೆ ಸೇರ್ಪಡೆ

 

error: Content is protected !!
Scroll to Top