ಮುಂಬೈನಲ್ಲಿ ಶಿವಸೇನಾ ಮುಖಂಡನ ಹತ್ಯೆ

(ನ್ಯೂಸ್ ಕಡಬ) newskadaba.com ಮುಂಬೈ . 26: ಮುಂಬೈನ ಲೋನವಾಲದಲ್ಲಿ ಇಂದು ಬೆಳಗ್ಗೆ 9.30ರ ಸಮಯದಲ್ಲಿ ಸ್ಥಳೀಯ ಶಿವಸೇನಾ ಘಟಕದ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಗುಂಡು ಹೊಡೆದು, ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ವಾಹನದಲ್ಲಿ ಬಂದ ಇಬ್ಬರು ಅಪರಿಚಿತರು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಯಾದ ವ್ಯಕ್ತಿಯನ್ನು ಲೋನವಾಲದ ಶಿವಸೇನೆಯ ಘಟಕದ ಮಾಜಿ ಅಧ್ಯಕ್ಷ ರಾಹುಲ್ ಉಮೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 9.30ರ ಸುಮಾರಿನಲ್ಲಿ ಅಪರಿಚಿತರು ಸಮೀಪದಿಂದ ಗುಂಡು ಹಾರಿಸಿದ್ದಾರೆ ಮತ್ತು ಇರಿದಿದ್ದಾರೆ. ರಾಹುಲ್ ಅವರನ್ನು ಆಸ್ಪತ್ರೆಗೆ ದಾಖಲಿಸುವ ಹೊತ್ತಿಗೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.ಈ ಸಂಬಂಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿ ಟಿವಿಯ ದೃಶ್ಯಾವಳಿಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ತೀವ್ರಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಗೃಹ ಸಾಲವನ್ನು ಪಾವತಿಸಲು ಬೈಕ್‌ ಕಳ್ಳತನ ಮಾಡಿದ ಲಿವ್ ಇನ್ ರಿಲೇಶನ್ ಶಿಪ್ ಜೋಡಿ..!

error: Content is protected !!
Scroll to Top