ಮೈಸೂರು ದಸರಾ : ನಂದಿ ಧ್ವಜಕ್ಕೆ ಸಿಎಂ ಬಿಎಸ್‌ವೈ ಪೂಜೆ

(ನ್ಯೂಸ್ ಕಡಬ) newskadaba.com ಮೈಸೂರು  . 26: ಮೈಸೂರು: ಸಂಭ್ರಮದ ಕ್ಷಣಗಳಿಗೆ ಮೈಸೂರು ಸಾಕ್ಷಿಯಾಗಿದೆ. ಮೈಸೂರು ದಸರಾ ಜಂಬೂ ಸವಾರಿ ಹಿನ್ನೆಲೆಯಲ್ಲಿ ನಂದಿ ಧ್ವಜಕ್ಕೆ ಸಿಎಂ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ, ಜಂಬೂ ಸವಾರಿ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ.

 

ಮಧ್ಯಾಹ್ನ 2.59ರಿಂದ 3.20ರ ಶುಭ ಮಕರ ಲಗ್ನದಲ್ಲಿ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಜೋಡಿ ನಂದಿ ಧ್ವಜಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಪೂಜೆ ಸಲ್ಲಿಸಿದರು. ಈ ವೇಳೆ  ಮಾತನಾಡಿದ ಅವರು, “ಕೊರೊನಾ ಹಿನ್ನೆಲೆಯಲ್ಲಿ ಸರಳ ದಸರಾ ಆಚರಣೆ ಮಾಡಲಾಗುತ್ತಿದೆ. ಈ ಬಾರಿ ಕೊರೊನಾ ಸೋಂಕಿನಿಂದ ಬಂಧಿತರಾಗಿದ್ದಾರೆ. ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ” ಎಂದು ತಿಳಿಸಿದರು. ಕೊರೊನಾ ವೈರಸ್ ಮುನ್ನೆಚ್ಚರಿಕೆ ನಡುವೆ, ಸಾಮಾಜಿಕ ಅಂತರ ಹಾಗೂ ಮಾಸ್ಕ್ ಸಮೇತ ಸಿಎಂ ಹಾಗೂ ಸಚಿವರು ನಂದಿ ಧ್ವಜ ಪೂಜೆಯಲ್ಲಿ ಭಾಗಿಯಾಗಿದ್ದರು.

Also Read  ತಿರುವೈಲ್ ➤ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

error: Content is protected !!
Scroll to Top