ಬಂಗಾರಪ್ಪ ಸ್ಮಾರಕ ನಿರ್ಮಿಸಲು 1 ಕೋಟಿ ರೂ. ಅನುದಾನ ➤ ಬಿ.ಎಸ್.ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 26. ಸೊರಬದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಸ್ಮಾರಕ ನಿರ್ಮಿಸಲು  1ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಬಂಗಾರಪ್ಪ ರವರ 87ನೇ ಜನ್ಮ ದಿನಾಚರಣೆ ಹಾಗೂ ಸೊರಬ ಪಟ್ಟಣದಲ್ಲಿ  21.15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಉದ್ಯಾನವನ್ನು ಶಿವಮೊಗ್ಗದಿಂದ ಆನ್‍ಲೈನ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ, ಆರೋಗ್ಯ ಹಾಗೂ ಕೃಷಿ ಕ್ಷೇತ್ರದಲ್ಲಿ ಬಂಗಾರಪ್ಪ ಅವರು ತಂದ ದೂರದೃಷಿ ಯೋಜನೆಗಳು ಇಂದಿಗೂ  ಜನರ ಮನದಲ್ಲಿ ಚಿರಸ್ಥಾಯಿಯಾಗಿ ಉಳಿದಿವೆ. ಅಲ್ಲದೇ  ಅವರು ಕೃಷಿ ಕಾರ್ಮಿಕರು, ರೈತರು, ದೀನ ದಲಿತರು ಮತ್ತು ಗ್ರಾಮೀಣ ಜನತೆಯ ಅಭ್ಯುಧಯಕ್ಕಾಗಿ ನಿರಂತರವಾಗಿ ಶ್ರಮಿಸಿದ್ದರು ಎಂದು ವರ್ಣಿಸಿದರು. ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಮೊದಲಾದವರು ಉಪಸ್ಥಿತರಿದ್ದರು.

Also Read  ಶಾಲೆಗೆಂದು ತೆರಳಿದ ಬಾಲಕಿ ದಾರುಣ ಅಂತ್ಯ➤ ಶಾಲಾರಂಭದ ದಿನವೇ ನಡೆಯಿತು ಮನಕಲಕುವ ಘಟನೆ

 

error: Content is protected !!
Scroll to Top