ಮಂಗಳೂರು ದಸರಾ ಉತ್ಸವಕ್ಕೆ ತೆರೆ ➤ ಸರಳವಾಗಿ ಸಂಪ್ನನಗೊಂಡ ನವರಾತ್ರಿ

(ನ್ಯೂಸ್ ಕಡಬ) newskadaba.com ಮಂಗಳೂರು . 27: ರಾಜ್ಯದಲ್ಲೇ ಮೈಸೂರು ಬಳಿಕ ಎರಡನೇ ಅತೀ ದೊಡ್ಡ ದಸರಾ ಎಂದು ಕರೆಸಿಕೊಳ್ಳುವ ಮಂಗಳೂರು ದಸರಾ ಉತ್ಸವಕ್ಕೆ ತೆರೆ ಬಿದ್ದಿದೆ. ನವರಾತ್ರಿಯ ಒಂಬತ್ತು ದಿನಗಳ ಕಾಲ ಕ್ಷೇತ್ರದಲ್ಲಿ ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ನಡೆಯಿತು.

ಕೋವಿಡ್ ಗೈಡ್‍ಲೈನ್ಸ್ ಪ್ರಕಾರ ಅತ್ಯಂತ ಸರಳವಾಗಿ ಈ ಬಾರಿ ದಸರಾ ಉತ್ಸವ ನೆರವೇರಿತು.ಅತ್ಯಂತ ವೈಭವದಿಂದ ನಡೆಯುತ್ತಿದ್ದ ಮಂಗಳೂರು ದಸರಾ ಈ ಬಾರಿ ಸರಳವಾಗಿ ನಡೆದಿದೆ. ಕುದ್ರೋಳಿ ದೇವಸ್ಥಾನದ ಆವರಣಕ್ಕೆ ಮಾತ್ರ ಸೀಮಿತವಾಗಿದ್ದ ದಸರಾ ಮಹೋತ್ಸವಕ್ಕೆ ತಡರಾತ್ರಿ ತೆರೆಬಿದ್ದಿದೆ. ನವರಾತ್ರಿಯ ಒಂಬತ್ತು ದಿನಗಳ ಕಾಲ ಕ್ಷೇತ್ರದಲ್ಲಿ ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ನಡೆಯಿತು.

ದೇವಸ್ಥಾನದಲ್ಲೇ ವಿಸರ್ಜನಾ ಪೂಜೆ ನೆರವೇರಿಸಿ ಹೊರಾಂಗಣದಲ್ಲೇ ಪ್ರದಕ್ಷಿಣೆ ಹಾಕಿ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಯಿತು.ಈ ಬಾರಿ ಕರೊನಾ ಕಾರಣದಿಂದ ಹುಲಿ ಕುಣಿತವೂ ಕೇವಲ ದೇವಸ್ಥಾನಕ್ಕೆ ಮಾತ್ರ ಸೀಮಿತವಾಗಿತ್ತು.ಸಾಂಪ್ರದಾಯಿಕ ಆಚರಣೆಗಳಿಗೆ ಚ್ಯುತಿ ಬಾರದಂತೆ, ಭಕ್ತರಿಗೂ ನೋವುಂಟಾಗದಂತೆ ನವರಾತ್ರಿ ಸಂಪನ್ನಗೊಂಡಿತು.

 

error: Content is protected !!

Join the Group

Join WhatsApp Group