ಮಂಡ್ಯ: ರಾಷ್ಟ್ರ ಪಕ್ಷಿ ನವಿಲು ಸಾವು ➤ ಗಂಟೆಗಳು ಕಳೆದರೂ ಸ್ಥಳಕ್ಕಾಗಮಿಸದ ಅರಣ್ಯ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಮಂಡ್ಯ, ಅ. 27. ಜಿಲ್ಲೆಯ ಮದ್ದೂರು ತಾಲೂಕಿನ ಕೆರಮೇಲದೊಡ್ಡಿ ಗ್ರಾಮದಲ್ಲಿ ಇಂದು ನವಿಲು ಅನುಮಾನಾಸ್ಪದವಾಗಿ ಮೃತಪಟ್ಟಿದೆ.  ಅದರಂತೆ ಮಳವಳ್ಳಿ ತಾಲೂಕು ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕರಡಿ ಗುಂಡಿಗೆ ಬಿದ್ದು ಸಾವನ್ನಪ್ಪಿದೆ.

 

 

ಆದರೆ ಈ ಎರಡು ಪ್ರಕರಣದಲ್ಲಿ ಮಾಹಿತಿ ನೀಡಿದರೂ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ತಕ್ಷಣ ಆಗಮಿಸದ ಕಾರಣ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವಿಲು ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ಶಂಕಿಸಲಾಗಿದೆ. ಇತ್ತ ಕರಡಿಗೆ ವಯಸ್ಸಾಗಿತ್ತು. ಈ ಹಿನ್ನೆಲೆಯಲ್ಲಿ 12 ಅಡಿ ಆಳದ ಗುಂಡಿಗೆ ಬಿದ್ದಿರುವ ಪರಿಣಾಮ ಮೃತಪಟ್ಟಿದೆ.

Also Read  ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳೂರಿಗೆ

 

 

error: Content is protected !!
Scroll to Top