(ನ್ಯೂಸ್ ಕಡಬ) newskadaba.com ಮಂಗಳೂರು, ಅ. 27. ಬೈಕ್ ಹಾಗೂ ಬೃಹತ್ ಗಾತ್ರದ ಟ್ರಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಇನ್ನೋಋವ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಹೊರವಲಯದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ನಡೆದಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನಲ್ಲಿದ್ದವರ ಗುರುತು ಇನ್ನೂ ಪತ್ತೆಯಾಗಿಲ್ಲ.