ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಹರ್ಯಾಣ . 28: ಹಾಡಹಗಲೇ ಕಾಲೇಜು ಆವರಣದಲ್ಲಿಯೇ 21 ವರ್ಷದ ಯುವತಿಯನ್ನು ಗುಂಡಿಟ್ಟು ಹತ್ಯೆಗೈದ ಘಟನೆ ಸೋಮವಾರ (ಅ.27) ಹರ್ಯಾಣದಲ್ಲಿ ನಡೆದಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಿಖಿತಾ ಟೋಮರ್ ಅಂತಿಮ ವರ್ಷದ ಕಾಮರ್ಸ್ ವಿದ್ಯಾರ್ಥಿನಿಯಾಗಿದ್ದು, ಪರೀಕ್ಷೆ ಬರೆಯಲು ಕಾಲೇಜಿಗೆ ತೆರಳಿದ್ದಳು. ಕಾರಿನಲ್ಲಿ ಆಗಮಿಸಿದ್ದ ದುಷ್ಕರ್ಮಿಗಳು ಯುವತಿಯನ್ನು ಅಪಹರಿಸಲು ಯತ್ನಿಸಿದ್ದರು. ಆದರೆ ಅದಕ್ಕೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದು, ಪಾಯಿಂಟ್ ಬ್ಲ್ಯಾಂಕ್ ರೇಂಜ್ ನಲ್ಲಿ ಗುಂಡಿಟ್ಟು ಹತ್ಯೆಗೈದಿರುವ ದೃಶ್ಯ ವಿಡಿಯೋದಲ್ಲಿ ದಾಖಲಾಗಿದೆ
ದೆಹಲಿಯಿಂದ 30 ಕಿಲೋ ಮೀಟರ್ ದೂರದಲ್ಲಿರುವ ಹರ್ಯಾಣದ ಫರಿದಾಬಾದ್ ನ ಬಲ್ಲಾಬ್ ಗಢ್ ಕಾಲೇಜಿನ ಹೊರಭಾಗದಲ್ಲಿ ಸೋಮವಾರ ಮಧ್ಯಾಹ್ನ 3.40ಕ್ಕೆ ಈ ಕೊಲೆ ಕೃತ್ಯ ನಡೆದಿದೆ.

Also Read  ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿದ ಭೂಪ

error: Content is protected !!
Scroll to Top