ಮಕ್ಕಳಿಗೆ ಲೈಂಗಿಕ ಕಿರುಕುಳ ➤ ವಿರೋಧಿಸಿದ ತಾಯಿಯನ್ನೇ ಹತ್ಯೆಗೈದ ಪಾಪಿಗಳು..!



(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಅ. 28. ತನ್ನ ಹೆಣ್ಣುಮಕ್ಕಳ ಮೇಲಿನ ಲೈಂಗಿಕ ಕಿರುಕುಳವನ್ನು ವಿರೋಧಿಸಿದ ಕಾರಣಕ್ಕಾಗಿ ತಾಯಿಯನ್ನು ಕೊಲೆಗೈದ ಘಟನೆ ಮನ್ಸೂರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ನಡೆದಿದೆ.





ಆರೋಪಿಗಳು ಪರಾರಿಯಾಗಿದ್ದು, ಆಕಾಶ್, ಗೋಪಿ, ಬಿನೇಂದ್ರ, ಮತ್ತು ರಾಜೇಶ್ ಎಂಬ ನಾಲ್ಕು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೃತ ಮಹಿಳೆಯ ಕುಟುಂಬ ಸದಸ್ಯರು ಸಲ್ಲಿಸಿದ ದೂರಿನಲ್ಲಿ, “ನೆರೆಹೊರೆಯ ನಾಲ್ಕು ಜನರು ತಮ್ಮ ಕುಟುಂಬದ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ಸೋಮವಾರ ಸಂಜೆ ನಾಲ್ವರು ಆರೋಪಿಗಳು ಆಕೆಯ ಮನೆಯೊಳಗೆ ಪ್ರವೇಶಿಸಿ ಸೆವ್ಟಿ ದೇವಿಯವರ ಮೇಲೆ ಹಲ್ಲೆ ನಡೆಸಿ, ಆಕೆಯನ್ನು ತೀವ್ರವಾಗಿ ಥಳಿಸಿದ್ದಾರೆ. ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.






error: Content is protected !!
Scroll to Top