ಬೆಳ್ತಂಗಡಿ :ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದತನ ಅರೇಸ್ಟ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ . 28: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಅರೆಸ್ಟ್ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ನಡೆದಿದೆ.

ನಾವೂರಿನ ನಿವಾಸಿ ಜನಾರ್ದನ ಪೂಜಾರಿ(42) ಎಂಬಾತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅ.22 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಪುಸಲಾಯಿಸಿ ಕೆರದುಕೊಂಡು ಹೋಗಿ ಕುವೆಟ್ಟು ಗ್ರಾಮದ ಮದ್ದಡ್ಕ ಬಳಿಯ ಸ್ನೇಹಿತನ ರೂಮಿನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಅಪ್ರಾಪ್ತೆ ಈ ವಿಚಾರವನ್ನು ಅ.26 ರಂದು ಮನೆಯವರಿಗೆ ತಿಳಿಸಿದ್ದಾಳೆ. ತಕ್ಷಣವೇ ಮನೆಯವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗಾ ಆರೋಪಿಯನ್ನು ಬಂದಿಸಿದ್ದು, ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Also Read  ಆತ್ಮ ನಿರ್ಭರ ಭಾರತ್ ಯೋಜನೆ ➤ ಜಿಲ್ಲಾ ಸಂಪನ್ಮೂಲ ಹುದ್ದೆಗೆ ಅರ್ಜಿ ಆಹ್ವಾನ

 

 

error: Content is protected !!
Scroll to Top