ಕಡಬ: ದ.ಕ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕರಾಗಿ ಕೃಷ್ಣ ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ. 28. ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕರಾಗಿ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿಯವರನ್ನು ನೇಮಕ ಮಾಡಲಾಗಿದೆ.

ಇವರು ಕಳೆದ ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಲ್ಲದೇ, ಕಡಬ ಕ್ಷೇತ್ರದ ಜಿ.ಪಂ. ಸದಸ್ಯರಾಗಿ, ಪುತ್ತೂರು ಎಪಿಎಂಸಿ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಬಿಜೆಪಿ ಸಮಿತಿ ಸದಸ್ಯರಾಗಿಯೂ ವಿವಿಧ ಕ್ಷೇತ್ರಗಳಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು.

Scroll to Top