ಉಡುಪಿಯಲ್ಲಿ ಗಾಂಜಾ ಸಾಗಾಟ ,ಮಾರಾಟ ಆರೋಪಿತರ ಪರೇಡ್ ➤ ಪೊಲೀಸ್ ವರಿಷ್ಠಾಧಿಕಾರಿಯಿಂದ ಆರೋಪಿಗಳಿಗೆ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com ಉಡುಪಿ . 28: ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರ ಪರೇಡನ್ನು ಬುಧವಾರ ಉಡುಪಿ ಜಿಲ್ಲೆಯ ಚಂದು ಮೈದಾನದಲ್ಲಿ ನಡೆಸಲಾಯಿತು.

 

ಪರೇಡ್ನಲ್ಲಿ ಬೈಂದೂರು ಠಾಣಾ ವ್ಯಾಪ್ತಿಯಿಂದ ಇಬ್ಬರು, ಕುಂದಾಪುರ ಠಾಣಾ ವ್ಯಾಪ್ತಿಯಿಂದ 18 ಜನ, ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಿಂದ 4 ಜನ, ಕೋಟಾ ಠಾಣಾ ವ್ಯಾಪ್ತಿಯಿಂದ ಇಬ್ಬರು, ಉಡುಪಿ ನಗರ ಠಾಣಾ ವ್ಯಾಪ್ತಿಯಿಂದ 12 ಜನ, ಮಲ್ಪೆ ಠಾಣಾ ವ್ಯಾಪ್ತಿಯಿಂದ 5 ಜನ, ಮಣಿಪಾಲ ಠಾಣಾ ವ್ಯಾಪ್ತಿಯಿಂದ 16 ಜನ, ಸೆನ್ ಠಾಣಾ ವ್ಯಾಪ್ತಿಯಿಂದ ಇಬ್ಬರು, ಕಾರ್ಕಳ ನಗರ ಠಾಣಾ ವ್ಯಾಪ್ತಿಯಿಂದ ಇಬ್ಬರು, ಪಡುಬಿದ್ರಿ ಠಾಣಾ ವ್ಯಾಪ್ತಿಯಿಂದ 5 ಜನ, ಕಾಪು ಠಾಣಾ ವ್ಯಾಪ್ತಿಯಿಂದ 3 ಜನ ಹಾಗೂ ಹಿರಿಯಡ್ಕ ಠಾಣಾ ವ್ಯಾಪ್ತಿಯಿಂದ ಓರ್ವ ಒಟ್ಟು 12 ಜನ ಆರೋಪಿತರು ಹಾಜರಿದ್ದರು.

Also Read  ಕಾಸರಗೋಡು: ಆಫ್ರಿಕನ್ ಹಂದಿ ಜ್ವರ ಪತ್ತೆ..!   ➤  ಹಂದಿ ಸಾಗಾಟ, ಮಾರಾಟ, ಮಾಂಸಕ್ಕೆ ನಿಷೇಧ  

 

ಪರೇಡ್ನಲ್ಲಿ ಭಾಗವಹಿಸಿದ್ದ ಆರೋಪಿತರನ್ನು ಉದ್ದೇಶಿಸಿ, ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಅವರು ಸಮಾಜದ ಸ್ವಾಸ್ತ್ರವನ್ನು ಕಾಪಾಡುವ ನಿಟ್ಟಿನಲ್ಲಿ ಇನ್ನು ಮುಂದಕ್ಕೆ ಇಂತಹ ಸಮಾಜದ್ರೋಹಿ ಚಟುವಟಿಕೆಗಳಲ್ಲಿ ಭಾಗವಹಿಸದೆ ಉತ್ತಮ ರೀತಿಯಲ್ಲಿ ಜೀವನ ನಡೆಸಲು ಕರೆ ನೀಡಿದರು. ಅಲ್ಲದೇ ಇದೇ ವೇಳೆ ಇನ್ನು ಮುಂದಕ್ಕೆ ಇಂತಹ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಹೋದಲ್ಲಿ ಕಠಿಣ ಕಾನೂನು ಕ್ರಮದ ಎಚ್ಚರಿಕೆಯನ್ನೂ ಸಹ ನೀಡಿದರು ಹಾಗೂ ಮಾದಕ ದ್ರವ್ಯ ಸಾಗಾಟ, ಮಾರಾಟಗಾರರ ಮಾಹಿತಿಯನ್ನು ನೀಡಿದಲ್ಲಿ ಮಾಹಿತಿ ನೀಡಿದವರ ವಿವರವನ್ನು ಗುಪ್ತವಾಗಿ ಇಡಲಾಗುವುದೆಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.

Also Read  ಉನ್ನತ ವ್ಯಾಸಂಗಕ್ಕೆಂದು ಭಾರತಕ್ಕೆ ಬಂದ ➤ ಮಾದಕ ವಸ್ತು ಮಾರಾಟ ಮಾಡಿ ಸಿಕ್ಕಿಬಿದ್ದ.⁉️

 

 

error: Content is protected !!
Scroll to Top