(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 28. ಕೋವಿಡ್ ಸೋಂಕಿನ ನಕರಾತ್ಮಕ ವರದಿ ನೀಡಲು ಲಂಚ ಪಡೆಯುತ್ತಿದ್ದ ಆರೋಪದ ಹಿನ್ನಲೆಯಲ್ಲಿ ಪೊಬ್ಬತ್ತಿ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ಶಾಂತ ಹಾಗೂ ಲ್ಯಾಬ್ ಟೆಕ್ನಿಷಿಯನ್ ಮಹಾಲಕ್ಷ್ಮೀ ಅವರನ್ನು ವಜಾಗೊಳಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.
ಆರೋಪಿಗಳು ಕೋವಿಡ್ ಪರೀಕ್ಷೆಯ ನೆಗೆಟೀವ್ ವರದಿ ನೀಡಲು 2500 ರೂ. ಲಂಚ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಜೊತೆಗೆ, ಆರೋಗ್ಯ ಕೇಂದ್ರದ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿಯಾದ ಡಾ.ಶೈಲಜಾ ಅವರನ್ನು ಕರ್ತವ್ಯ ನಿರ್ಲಕ್ಷತನ ಹಿನ್ನಲೆಯಲ್ಲಿ ಪಾಲಿಕೆ ಸೇವನೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ದಕ್ಷಿಣ ವಿಭಾಗದ ಜಂಟಿ ಆಯುಕ್ತರು ತಿಳಿಸಿದ್ದಾರೆ.