ಬಂಟ್ವಾಳ: ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 28. ಅಂಗಡಿಗೆ ನುಗ್ಗಿ ಫೋಟೋಗ್ರಾಪರ್ ಓರ್ವರ ಮೇಲೆ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ಇಂದು ರಾತ್ರಿ ಫರಂಗಿಪೇಟೆಯಲ್ಲಿ ನಡೆದಿದೆ.

ಹಲ್ಲೆಗೊಳಗಾದವರನ್ನು ಫರಂಗಿಪೇಟೆಯ ಸ್ಟುಡಿಯೋ ಒಂದರ ಮಾಲಕರಾದ ದಿನೇಶ್ ಕೊಟ್ಟಿಂಜ ಎಂದು ತಿಳಿದು ಬಂದಿದೆ. ಇವರ ಮೇಲೆ ಯಾರೋ ಅಪರಿಚಿತ ವ್ಯಕ್ತಿಗಳು ತಲವಾರಿನಿಂದ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ ವೆಲೆಂಟೈನ್ ಡಿ’ಸೋಜ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್, ಎಸ್. ಐ.ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top