ದೇಗುಲದಲ್ಲಿ ಪ್ರಸಾದ ಸೇವಿಸಿ 70 ಮಂದಿ ಅಸ್ವಸ್ಥ.!

(ನ್ಯೂಸ್ ಕಡಬ) newskadaba.com ಮಂಡ್ಯ . 29: ಮಾರಮ್ಮ ದೇವಿಯ ಪ್ರಸಾದ ಸೇವಿಸಿ 70 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಲಿಂಗಪಟ್ಟಣ ಗ್ರಾಮದಲ್ಲಿ ಘಟನೆ ನಡೆದಿದೆ.

 

ಕಳೆದ ದಿನ ರಾತ್ರಿ ಗ್ರಾಮದ ಮಾರಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿತ್ತು. ಪೂಜೆ ನೆರವೇರಿಸಿ ಪ್ರಸಾದಕ್ಕಾಗಿ ಪುಳಿಯೋಗರೆ ಮಾಡಲಾಗಿತ್ತು. ಇದನ್ನು ಸೇವಿಸಿದ 70ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ದೇವಾಲಯದ ಪೂಜೆಗೆ ಭಾಗವಹಿಸಿದ್ದ 200 ಜನರಲ್ಲಿ ಸುಮಾರು 100 ಮಂದಿ ಪ್ರಸಾದ ಸೇವನೆ ಮಾಡಿದ್ದಾರೆ. ಅವರಲ್ಲಿ 70ಕ್ಕೂ ಅಧಿಕ ಮಂದಿ ಅತಿಸಾರದಿಂದ ಮಳವಳ್ಳಿ ತಾಲೂಕು ವೈದ್ಯಾಧಿಕಾರಿಗಳು ಹಾಗೂ ವೈದ್ಯರ ತಂಡ ಗ್ರಾಮಕ್ಕೆ ಭೇಟಿ ನೀಡಿದ್ದು, ಅಸ್ವಸ್ಥರ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದೆ.

Also Read  ನಂದಿನಿಯೇತರ ಎಲ್ಲಾ ಬ್ರ್ಯಾಂಡ್ ಗಳ ತುಪ್ಪದ ತಪಾಸಣೆಗೆ ಆದೇಶ..!

 

error: Content is protected !!
Scroll to Top