ಮಲ್ಪೆ ಬಂದರಿನಲ್ಲಿ 17 ಮಕ್ಕಳ ರಕ್ಷಣೆ.!

(ನ್ಯೂಸ್ ಕಡಬ) newskadaba.com ಮಲ್ಪೆ  . 29: ಮಲ್ಪೆ ಬಂದರಿನಲ್ಲಿ ಮೀನು ಆಯುವ ಬಳ್ಳಾರಿ ಮತ್ತು ಕೊಪ್ಪಳ ಮೂಲದ 17 ಮಕ್ಕಳನ್ನು ಗುರುವಾರ ಬೆಳಿಗ್ಗೆ ರಕ್ಷಣೆ ಮಾಡಲಾಗಿದೆ. ಮಕ್ಕಳ ರಕ್ಷಣಾ ಘಟಕ ಹಾಗು ಇತರೆ ಇಲಾಖೆ ಅಧಿಕಾರಿಗಳು ಇಂದು ಬೆಳಿಗ್ಗೆ ಮಲ್ಪೆ ಬಂದರಿಗೆ ದಾಳಿ ನಡೆಸಿ ಮೀನು ಆಯುವ ಕಾರ್ಯದಲ್ಲಿ ತೊಡಗಿದ್ದ 17 ಮಂದಿ ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಾರ್ವಜನೀಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ನಾಗರಿಕ ಸೇವಾ ಟ್ರಸ್ಟ್ ಉಡುಪಿ ಇದರ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಬಾಲ ಕಾರ್ಮಿಕರ ರಕ್ಷಣೆ ಮಾಡಲಾಗಿದೆ.ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಸದಾನಂದ ನಾಯಕ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

 

Also Read  ಉಡುಪಿ: ದೋಷ ಪೂರಿತ ಟೈಲ್ಸ್‌ ಪೂರೈಕೆ   ➤ ಕಂಪನಿ ಮತ್ತು ಡೀಲರ್‌ ಗೆ 1 ಲಕ್ಷ ರೂ. ದಂಡ

error: Content is protected !!
Scroll to Top