ಮಂಗಳೂರಿನಲ್ಲಿ ಕ್ರಿಕೆಟ್‌ ದಂಧೆ ➤ 16 ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 29. ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 16 ಮಂದಿಯನ್ನು ಮಂಗಳೂರು ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 28 ಮೊಬೈಲ್, 8 ಲಕ್ಷ ರೂಪಾಯಿ ಮೌಲ್ಯದ ಕಾರ್, 2.67 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.

 

 

ಐಪಿಎಲ್ ನಡೆಯುತ್ತಿರುವುದರಿಂದ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿ ನಡೆಯುತ್ತಿದೆ. ಇದರಿಂದಾಗಿ ಮಂಗಳೂರಿನ ವಿವಿಧೆಡೆ ಕಾರ್ಯಾಚರಣೆ ನಡೆಸಲಾಗಿದ್ದು, 4 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

Also Read  ಗಂಡಿಬಾಗಿಲು: ಎಸ್.ಕೆ.ಎಸ್.ಎಸ್.ಎಫ್. ವತಿಯಿಂದ ► ಸಮಸ್ತ ಅಗಲಿದ ನೇತಾರರ ಅನುಸ್ಮರಣೆ, ತಹ್ಲೀಲ್ ಸಮರ್ಪಣೆ

 

 

 

error: Content is protected !!
Scroll to Top