ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಗುದ್ದಿದ ಕಾರು ➤ ಚಾಲಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು . 29: ಅತಿವೇಗವಾಗಿ ಚಲಿಸುತಿದ್ದ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಗುದ್ದಿ, ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಲ್ಲಿನ ಬೋಗಾದಿ ಜಂಕ್ಷನ್ ಬಳಿ ನಡೆದಿದೆ.

 

ಕಾರು ಕುಕ್ಕರಹಳ್ಳಿ ಕೆರೆಯ ಬಳಿಯಿಂದ ಬೋಗಾದಿ ಜಂಕ್ಷನ್ ಕಡೆ ಅತಿವೇಗವಾಗಿ ಚಲಿಸುತ್ತಿತ್ತು ಎನ್ನಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು ಚಾಲಕ ಚನ್ನಪಟ್ಟಣ ನಿವಾಸಿ ಅರುಣ್ ಕುಮಾರ್(23) ಸ್ಥಳದಲ್ಲೇ ಮೃತನಾಗಿದ್ದಾನೆ.ಕಾರಿನಲ್ಲಿ ಪ್ರಯಾಣಿಸುತಿದ್ದ ಇನ್ನೂ ಮೂವರು ಗಂಭಿರವ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕೆ.ಆರ್.ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Scroll to Top