ಬೆಟ್ಟದಿಂದ ವ್ಯಾನ್ ಉರುಳಿ 7 ಮಂದಿ ಮೃತ್ಯು.!?

(ನ್ಯೂಸ್ ಕಡಬ) newskadaba.com ಹೈದರಾಬಾದ್ . 30: ಮದುವೆ ಸಮಾರಂಭ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವಾಹನ ಬ್ರೇಕ್​ ಫೇಲ್​ ಆದ ಕಾರಣ ಬೆಟ್ಟದಿಂದ ಕೆಳಗಡೆ ಉರುಳಿ, 7 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಆಂಧ್ರ ಪ್ರದೇಶದ ಈಸ್ಟ್​ ಗೋದಾವರಿ ಜಿಲ್ಲೆಯ ತಂತಿಕೊಂಡ ಜಿಲ್ಲೆಯಲ್ಲಿ ನಡೆದಿದೆ.

ಶುಕ್ರವಾರ ನಸುಕಿನ ಜಾವ 3.30ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ತಂತಿಕೊಂಡಾ ಘಾಟ್​ ರಸ್ತೆಯಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ದುರ್ಘಟನೆ ಸಂಭವಿಸಿದೆ. ಮದುವೆ ಮಂಟಪದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ವ್ಯಾನ್​ ಬೆಟ್ಟದಿಂದ ಕೆಳಕ್ಕೆ ಉರುಳಿದೆ. ಏಳು ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಗೋಕವರಂ ಮಂಡಲದ ಠಾಕೂರ್‌ಪಾಲೆಂ ಗ್ರಾಮಕ್ಕೆ ಸೇರಿದವರು ಎಂದು ತಿಳಿದು ಬಂದಿದೆ.

Also Read  ಜ. 26ಕ್ಕೆ ಕಿಸಾನ್ ಪರೇಡ್ ➤ 25 ಸಾವಿರ ಟ್ರಾಕ್ಟರ್ ದೆಹಲಿಗೆ ಆಗಮಿಸುವ ಸಾಧ್ಯತೆ

error: Content is protected !!
Scroll to Top