ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣ ➤ ಐವರು ಆರೋಪಿಗಳಿಗೆ ಪೊಲೀಸ್‌ ಕಸ್ಟಡಿ

(ನ್ಯೂಸ್ ಕಡಬ) newskadaba.com ಬಂಟ್ವಾಳ . 30: ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ಅ. 20ರಂದು ನಡೆದ ಚಿತ್ರನಟ ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

 

ಬಂಟ್ವಾಳದ ಅಮ್ಟಾಡಿ ಗ್ರಾಮದ ಅಜೆಕಲ ನಿವಾಸಿ ಸತೀಶ್‌ ಕುಲಾಲ್‌, ನೀರುಮಾರ್ಗ ಬೊಂಡಂತಿಲ ನಿವಾಸಿ ಗಿರೀಶ್‌, ವೆಂಕಪ್ಪ ಯಾನೆ ವೆಂಕಟೇಶ್‌, ಪ್ರದೀಪ್‌ ಯಾನೆ ಪಪ್ಪು ಹಾಗೂ ಶರೀಫನ್ನು ಬಂಧಿಸಲಾಗಿದೆ.ಇವರಿಗೆ ಐದು ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಲಾಗಿದೆ. ದ.ಕ.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್‌ ಹಾಗೂ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್‌ ಡಿಸೋಜಾ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಪೊಲೀಸ್‌ ಸರ್ಕಲ್‌ ಇನ್ಸ್ಪೆಕ್ಟರ್‌ ಟಿ.ಡಿ.ನಾಗರಾಜ್‌ ಅವರು ಪ್ರಕರಣದ ತನಿಖೆ ನಡೆಸುತ್ತಿದ್ದು, ಎಸ್ಐಗಳಾದ ಪ್ರಸನ್ನ, ಕಲೈಮಾರ್‌, ಅವಿನಾಶ್‌, ನಂದಕುಮಾರ್‌, ವಿನೋದ್‌, ರಾಜೇಶ್‌, ಪಿಐ ರವಿ ಮತ್ತು ಡಿಸಿಐಬಿ ಸಿಬ್ಬಂದಿಗಳನ್ನು ಒಳಗೊಂಡ ಒಟ್ಟು 5 ವಿಶೇಷ ಪತ್ತೆ ತಂಡಗಳನ್ನು ರಚಿಸಲಾಗಿತ್ತು.ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಹತ್ಯೆಯ ಹಿಂದಿರುವ ಇತರ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

Also Read  ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಮೃತ್ಯು- ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ

 

error: Content is protected !!
Scroll to Top