ಸರ್ಕಾರಿ ಸೇವೆಯಲ್ಲಿರುವವರ ಗಮನಕ್ಕೆ ➤ ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇದ.!?

(ನ್ಯೂಸ್ ಕಡಬ) newskadaba.com ಬೆಂಗಳೂರು . 31: ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಡವಳಿಕೆ) ನಿಯಮ-2020 ಕರಡನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿದೆ. ರಾಜ್ಯ ಸರ್ಕಾರಿ ಸೇವೆಯಲ್ಲಿರುವವರು ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇಧ ಹೇರುವ ಪ್ರಸ್ತಾಪವನ್ನು ಕರಡುವಿನಲ್ಲಿ ಮಾಡಲಾಗಿದೆ. ಸರ್ಕಾರಿ ಸೇವೆಯಲ್ಲಿರುವವರು ಏನು ಮಾಡಲು ಮುಕ್ತರು, ಏನು ಮಾಡಬಾರದು ಎಂಬುದರ ಬಗ್ಗೆ ಕರಡುವಿನಲ್ಲಿ ವಿವರಣೆಯನ್ನೂ ನೀಡಲಾಗಿದೆ.

 

ಕರಡು ನಿಯಮಗಳ ಗಮನಾರ್ಹ ಅಂಶಗಳ ಉಲ್ಲೆಖದಂತೆ ‘ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದ ಹೊರತು ಸರ್ಕಾರಿ ಸೇವೆಯಲ್ಲಿರುವ ಯಾವುದೇ ವ್ಯಕ್ತಿ ನೌಕರರು ಚಲನಚಿತ್ರಗಳು ಮತ್ತು ಟೆಲಿವಿಷನ್ ಧಾರಾವಾಹಿಗಳಲ್ಲಿ ನಟಿಸುವಂತಿಲ್ಲ. ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟವಾಗಿರುವ ಕರಡುವಿನ ಅಂಶಗಳ ಬಗೆಗಿನ ಸಲಹೆ ಮತ್ತು ಆಕ್ಷೇಪಣೆಯನ್ನು ಸಲ್ಲಿಸಲು ಸರ್ಕಾರ 15 ದಿನಗಳ ಕಾಲಾವಕಾಶವನ್ನೂ ನೀಡಿದೆ. ಇದರ ನಂತರ ಕರಡು ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ.

Also Read  ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ - ಮಹಿಳೆಗೆ ಢಿಕ್ಕಿ

 

error: Content is protected !!
Scroll to Top