ರಾತ್ರೋರಾತ್ರಿ ಮಾಜಿ ಮೇಯೆರ್ ಸಂಪತ್ ರಾಜ್ ಪರಾರಿ…?!

(ನ್ಯೂಸ್ ಕಡಬ) newskadaba.com ಬೆಂಗಳೂರು . 31: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಮತ್ತೊಂದು ತಿರುವು ಪಡೆದಿದೆ. ಪ್ರಕರಣಕ್ಕೆ ಕಾರಣವಾಗಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೂಡ ಬಂಧಿಸಲಾಗುತ್ತದೆ ಎನ್ನಲಾಗುತ್ತಿತ್ತು. ಇದರ ಬೆನ್ನಲ್ಲೇ ಮಾಜಿ ಮೇಯರ್ ಸಂಪತ್ ರಾಜ್ ಪರಾರಿಯಾಗಿದ್ದಾರೆ ಎನ್ನಲಾಗಿದೆ.

 

ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲ್ಪಟ್ಟಿದ್ದಂತ ಮಾಜಿ ಮೇಯರ್ ಸಂಪತ್ ರಾಜ್ ಬಂಧನಕ್ಕೆ ಸಿಸಿಬಿ ತಯಾರಿ ನಡೆಸಿತ್ತು ಎನ್ನಲಾಗಿತ್ತು. ಇದರ ಬೆನ್ನಲ್ಲೇ ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು  ಗುರುವಾರ ಮಾಜಿ ಮೇಯರ್ ಸಂಪತ್ ರಾಜ್ ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಬ್ಯಾಪಿಸ್ಟನ್ ಹಾಸ್ಪತ್ರೆಗೆ ದಾಖಲಾಗಿದ್ದರು. ಹೀಗೆ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಮಾಜಿ ಮೇಯರ್ ಸಂಪತ್ ರಾಜ್, ರಾತ್ರೋರಾತ್ರಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.ಹೀಗಾಗಿ ಸಿಸಿಬಿ ಪೊಲೀಸರು ಸಂಪತ್ ರಾಜ್ ಗಾಗಿ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

Also Read  ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

 

error: Content is protected !!
Scroll to Top