ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು . 31: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 100 ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ಮಾರ್ಗ ಸೂಚಿ ಅನ್ವಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ರಾಜ್ಯೋತ್ಸವ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದಾರೆ.

 

 

ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ. ಹಾಗಾಗಿ ನವೆಂಬರ್ 1 ರಂದು ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಆಚರಣೆ ಮಾಡಬೇಕು ಎಂದು ತಿಳಿಸಿದ್ದಾರೆ. ಕಾರ್ಯಕ್ರಮ ನಡೆಸುವ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್ ಹಾಕಿಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ನಡೆಸುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.ರಾಜ್ಯೋತ್ಸವದ ಆಚರಣೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯ ಉಂಟಾಗಲು ಗೌರವ ಪೂರಕವಾಗಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಆಚರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದ್ದಾರೆ.

Also Read  ಎಸ್ಡಿಪಿಐ ಬಡಗಜೆಕಾರು ಗ್ರಾಮ ಸಮಿತಿ ➤ ಗ್ರಾ.ಪಂ. ಚುನಾವಣಾ ಅಭ್ಯರ್ಥಿ ಘೋಷಣಾ ಕಾರ್ಯಕ್ರಮ

 

error: Content is protected !!
Scroll to Top